ಸಾರಾಂಶ
ಮಾನವನಾಗುವುದು
ಲೇಖಕರು:
ಜೆ ಕೃಷ್ಣಮೂರ್ತಿ
ಅನುವಾದಕರು :
ಡಾ. ಮಹಾಬಲೇಶ್ವರ ರಾವ್
ಪ್ರಕಾರ:
ತತ್ವಶಾಸ್ತ್ರ
ಪ್ರಕಾಶಕರು:
ವಸಂತ ಪ್ರಕಾಶನ
ಆಕಾರ:
1/8 ಡೆಮಿ
ಮುದ್ರಣ:
2014
ರಕ್ಷಾಪುಟ:
ವಿವೇಕ್ ರಾಜು
ಪುಟಗಳು:
264
ಬೆಲೆ:
180 ರೂ.
ಲೇಖಕರ ಪರಿಚಯ
ಮಹಾಬಲೇಶ್ವರ ರಾವ್ ಅವರು ಹುಟ್ಟಿದ್ದು ೧೯೫೨ರಲ್ಲಿ, ಉಡುಪಿ ಜಿಲ್ಲೆಯ ಮಣೂರು ಗ್ರಾಮದಲ್ಲಿ. ಎಂ.ಎ., ಎಂ.ಎಡ್, ಮತ್ತು ಪಿಎಚ್.ಡಿ. ಪದವೀಧರರಾದ ಅವರು ಆರು ವರ್ಷ ಪ್ರೌಢಶಾಲಾ ಕನ್ನಡ ಶಿಕ್ಷಕರಾಗಿ, ಮೂರು ವರ್ಷ ಆಕಾಶವಾಣಿಯ ಭದ್ರಾವತಿ ಹಾಗೂ ಮಂಗಳೂರು ಕೇಂದ್ರಗಳಲ್ಲಿ ಪ್ರಸಾರಾಧಿಕಾರಿಯಾಗಿ ಸೇವೆ ಸಲ್ಲಿಸಿದರು; ಸುಮಾರು ೩೦ ವರ್ಷ ಉಡುಪಿಯ ಡಾ: ಟಿ.ಎಂ.ಎ.ಪೈ ಶಿಕ್ಷಣ ಮಹಾವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿದ್ದರು; ೧೪ ವರ್ಷ ಪ್ರಾಂಶುಪಾಲರಾಗಿದ್ದರು. ಲೇಖಕರಾಗಿ, ಅನುವಾದಕರಾಗಿ, ಅಂಕಣಕಾರರಾಗಿ ಪ್ರಸಿದ್ಧರಾಗಿರುವ ಅವರು ಪ್ರಾಥಮಿಕ ಹಂತದಿಂದ ಹಿಡಿದು ಸ್ನಾತಕೋತ್ತರ ಹಂತದ ವರೆಗಿನ ಶಿಕ್ಷಕರ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ದುಡಿದವರು; ’ಉದಯವಾಣಿ’, ’ಪ್ರಜಾವಾಣಿ’, ’ತರಂಗ’, ’ಹೊಸತು’, ಮೊದಲಾದ ಪತ್ರಿಕೆಗಳಲ್ಲಿ ಶಿಕ್ಷಣ, ಕ್ರೀಡೆ, ಚಲನ ಚಿತ್ರ, ಸಾಹಿತ್ಯ ಮುಂತಾದ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ನೂರಾರು ಲೇಖನಗಳನ್ನು ಪ್ರಕಟಿಸಿದವರು. ಮಹಾಬಲೇಶ್ವರ ರಾವ್ ಅವರು ಬರೆದಿರುವ, ಅನುವಾದಿಸಿರುವ ನೂರಕ್ಕೂ ಹೆಚ್ಚು ಪುಸ್ತಕಗಳಲ್ಲಿ ಸೃಜನಶೀಲತೆ, ಕಾರಂತರ ದೃಷ್ಟಿ-ಸೃಷ್ಟಿ, ಭಾರತೀಯ ಜನಪದ ಕತೆಗಳು (ಎ.ಕೆ.ರಾಮಾನುಜನ್), ಮನೆ-ಶಾಲೆ, ಸಂಶೋಧನ ಮಾರ್ಗ, ಶಿಕ್ಷಣದಲ್ಲಿ ಮನೋವಿಜ್ಞಾನ, ಪ್ರೌಢ ಶಾಲೆಗಳಲ್ಲಿ ಕನ್ನಡ ಬೋಧನೆ, ಸ್ಥಿತ್ಯಂತರ, ಉದಯೋನ್ಮುಖ ಭಾರತದಲ್ಲಿ ಶಿಕ್ಷಣ, ಬಾಳಿಗೊಂದು ಭಾಷ್ಯ (೩ ಸಂಪುಟಗಳಲ್ಲಿ ಜೆ.ಕೆ.), ಪರಿಸರ ಶಿಕ್ಷಣ, ಮಹಿಳಾ ಶಿಕ್ಷಣ, ಪ್ರಾಥಮಿಕ ಶಿಕ್ಷಣ: ಸಮಸ್ಯೆಗಳು - ಸವಾಲುಗಳು ಮುಖ್ಯವಾದುವು. ’ಡಾ: ಹಾ.ಮಾ. ನಾಯಕ ದತ್ತಿನಿಧಿ ಪುರಸ್ಕಾರ’, ’ಗೊರೂರು ಸಾಹಿತ್ಯ ಪುರಸ್ಕಾರ’, ’ಶ್ರೀ.ವಸುದೇವ ಭೂಪಾಲಂ ದತ್ತಿನಿಧಿ ಪುರಸ್ಕಾರ’, ’ಉಪಾಧ್ಯಾಯ ಸಮ್ಮಾನ್ ರಾಜ್ಯ ಪುರಸ್ಕಾರ’. ’ಅಂತಾರಾಷ್ಟ್ರೀಯ ರೋಟರಿ ವೃತ್ತಿ ಶ್ರೇಷ್ಠತಾ ಪುರಸ್ಕಾರ’ - ಇವು ಅವರು ಪಡೆದಿರುವ ಅನೇಕ ಪ್ರಶಸ್ತಿಗಳಲ್ಲಿ ಗಮನಾರ್ಹವಾದುವು.