ಪುಸ್ತಕ - ನಿಮ್ಮ ಕೈಯಲ್ಲಿ ಹಿಡಿದಿರುವ ಕನಸು.
images
ಡಾ.ಆರ್.ಗಣೇಶ್

ಅವಧಾನಿ

ಡಾ.ಆರ್.ಗಣೇಶ್, ಒಬ್ಬ ಅವಧಾನಿ. ಕನ್ನಡದಲ್ಲಿ ಅವಧಾನ ಕಲೆಯನ್ನು ಪ್ರಚುರಗೊಳಿಸಿದ್ದಾರೆ. ಕಿರಿಯ ವಯಸ್ಸಿನಲ್ಲೇ ಹಿರಿಯ ಸಾಧನೆ ಮಾಡಿರುವ ಗಣೇಶ್ “ಕನ್ನಡದಲ್ಲಿ ಅವಧಾನ ಕಲೆ” ಎಂಬ ತಮ್ಮ ಮಹಾಪ್ರಬಂಧಕ್ಕೆ ಹಂಪಿಯ ಕನ್ನಡ ವಿಶ್ವವಿದ್ಯಾನಿಲಯ ತನ್ನ ಪ್ರಪ್ರಥಮ ಡಿ.ಲಿಟ್. ಪದವಿಯನ್ನು ನೀಡಿ ಗೌರವಿಸಿದೆ. ಪ್ರಸ್ತುತ, ಭಾರತೀಯ ವಿದ್ಯಾಭವನದ ಬೆಂಗಳೂರು ಶಾಖೆಯ ಸಂಸ್ಕೃತ ವಿಭಾಗದ ನಿರ್ದೇಶಕರಾಗಿ ದುಡಿಯುತ್ತಿದ್ದಾರೆ.
ಎಂಜಿನಿಯರಿಂಗ್‌ನಿಂದ ಹಿಡಿದು ತತ್ವಶಾಸ್ತ್ರದವರೆಗೆ ಅನೇಕ ವಿಷಯಗಳಲ್ಲಿ ಪರಿಣತಿಯನ್ನು ಪಡೆದಿರುವ ‘ಗಣೇಶ್, ಕನ್ನಡದ/ಕರ್ನಾಟಕ, ಭಾರತದ ಸಾರಸ್ವತ ಲೋಕದಲ್ಲಿ ಅತ್ಯಂತ ಪ್ರತಿಭಾಪೂರ್ಣವ್ಯಕ್ತಿಯಾಗಿ ತಮ್ಮ ಅನುಪಮ ಸೇವೆಯನ್ನು ಸಲ್ಲಿಸುತ್ತಿದ್ದಾರೆ. ಬಾಲ್ಯದಿಂದಲೂ ಅವರಿಗೆ ಒಬ್ಬ ಕನ್ನಡದ ಹೆಸರಾಂತ ಕವಿಯಾಗಬೇಕೆನ್ನುವ ತುಡಿತವಿತ್ತು. ಆದರೆ ತಂದೆ-ತಾಯಂದಿರ ಆಶೆಗೆ ಮನ್ನಣೆ ಇತ್ತು. ಯಂತ್ರಶಾಸ್ತ್ರದಲ್ಲಿ ಎಂಜಿನಿಯರಿಂಗ್ ಪದವಿ, ಸ್ನಾತ್ತಕೋತ್ತರ ಪದವಿ, ಲೋಹಶಾಸ್ತ್ರ ಹಾಗೂ ವಸ್ತುವಿಜ್ಞಾನದಲ್ಲಿ ತಮ್ಮ ಪಿ.ಎಚ್ ಡಿ. ಪದವಿಯನ್ನು ಪಡೆದು ವೃತ್ತಿಯಿಂದ ಅಧ್ಯಾಪಕರಾಗಿದ್ದವರು. ಇದ್ದಕ್ಕಿದ್ದಂತೆಯೇ ಅವಕಾಶ ದೊರೆತಾಗ, ಅವಧಾನ ಕಲೆಯತ್ತ ತಮ್ಮ ಪೂರ್ಣ ಗಮನವನ್ನು ನೀಡಿ, ಅದನ್ನು ಸಂಪೂರ್ಣವಾಗಿ ಅರಗಿಸಿಕೊಂಡು, ಅದರ ಪ್ರಚಾರಕ್ಕಾಗಿ ಶ್ರಮಿಸುತ್ತಿದ್ದಾರೆ.

ಡಾ.ಆರ್.ಗಣೇಶ್ ಪುಸ್ತಕ ಪಡೆಯಿರಿ